ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ
ವಿಟ್ಲ: ಜಿಲ್ಲಾಡಳಿತ ಆದೇಶ ನೀಡಿದ ವಾರಾಂತ್ಯ ಕರ್ಫ್ಯೂ ವಿಟ್ಲದಲ್ಲಿ ಯಶಸ್ವಿಯಾಗಿದೆ. ವಿಟ್ಲದ ನಾಲ್ಕು ರಸ್ತೆಗಳಲ್ಲಿ ವಿಟ್ಲ ಪ್ರಭಾರ ಎಸೈ ರಾಜೇಶ್ ಕೆ.ವಿ ನೇತೃತ್ವದಲ್ಲಿ ಪ್ರೊಬೆಷನರಿ ಎಸೈ ಮಂಜುನಾಥ ಮತ್ತು ಪೊಲೀಸರ ತಂಡ ನಾಕಾಬಂಧಿ ಅಳವಡಿಸಿದ್ದರು. ಹಾಲು ಮತ್ತು ಮೆಡಿಕಲ್ ಹೊರತುಪಡಿಸಿ, ಅನಗತ್ಯವಾಗಿ ಪೇಟೆಗೆ ಬಂದ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು. ವಿಟ್ಲ ಪೇಟೆಯಲ್ಲಿ ಜನಸಂಚಾರ, ವಾಹನಗಳಿಲ್ಲದೇ ಬಿಕೋ ಎನ್ನುತ್ತಿದ್ದು, ಪೇಟೆ ಸಂಪೂರ್ಣ ಸ್ತಬ್ಧಗೊಂಡಿದೆ.
ವಿಟ್ಲ: ಅನಗತ್ಯವಾಗಿ ವಿಟ್ಲ ಪೇಟೆ ಪ್ರವೇಶಿಸಿ ನೋ ಪಾರ್ಕಿಂಗ್ ನಲ್ಲಿ ವಾಹನಗಳನ್ನು ನಿಲ್ಲಿಸಿ ವಾಹನ ದಟ್ಟಣೆಗೆ ಕಾರಣವಾದ ವಾಹನಗಳನ್ನು ವಿಟ್ಲ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಜಿಲ್ಲಾಧಿಕಾರಿ ಲಾಕ್ ಡೌನ್ ಸಡಿಲಿಕೆಗೊಳಿಸಿದ್ದರಿಂದ ಇಂದು ಪೇಟೆಯಲ್ಲಿ ಹೆಚ್ಚಿನ ವಾಹನ ದಟ್ಟನೆ ಉಂಟಾಗಿದೆ. ವಿಟ್ಲ-ಪುತ್ತೂರು ರಸ್ತೆಯ ಎಂಪೈರ್ ಮಾಲ್ ನ ಮುಂಭಾಗ ದ್ವಿಚಕ್ರವಾಹನಗಳನ್ನು ನಿಲ್ಲಿಸಿ ಅದರ ಸವಾರರ ತೆರಳಿದ್ದರು. ಇದರಿಂದ ಪುತ್ತೂರು ರಸ್ತೆಯಲ್ಲಿ ವಾಹನ ದಟ್ಟಣೆ
ವಿಟ್ಲ: ನವಭಾರತ್ ಯುವಕ ಸಂಘ ಅನಂತಾಡಿ ವತಿಯಿಂದ ಪರಿಸರ ಸಂರಕ್ಷಣಾ ಪ್ರಯುಕ್ತ ಮನೆಗೊಂದು ಸಸಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಅನಂತಾಡಿ ಗ್ರಾಮದ ಸುತ್ತ ಮುತ್ತಲಿನ ಹಲವಾರು ಮನೆಗಳಿಗೆ ಆರ್ಯುವೇದಿಕ್ ಸಂಬಧಿಸಿದ ಸಸಿಗಳನ್ನು ನೀಡಿದರು.ಈ ಕಾರ್ಯ ಕ್ರಮದಲ್ಲಿ ನವಭಾರತ್ ಅಧ್ಯಕ್ಷ ಪವನ್ ಕುಮಾರ್ ಅನಂತಾಡಿ, ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡು ಯಂತ್ರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿ ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಮುಂಭಾಗದಿಂದ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು
ವಿಟ್ಲ: ವಿಟ್ಲದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ನಿರ್ಣಯದಂತೆ ಶನಿವಾರ ಮತ್ತು ಭಾನುವಾರ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿದ್ದು, ಶನಿವಾರ ವಿಟ್ಲ ಪೇಟೆ ಸಂಪೂರ್ಣವಾಗಿ ಸ್ತಬ್ಧ ಗೊಂಡಿದೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳು ಬಂದ್ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಯಾವುದೇ ಅಂಗಡಿಗಳು ಬಾಗಿಲು ತೆರೆದಿಲ್ಲ. ಜನರು ಪೇಟೆಗೆ ಕಾಲಿಟ್ಟಿಲ್ಲ. ತುರ್ತು ಅವಶ್ಯಕತೆ ತೆರಳುವರಿಗೆ ವಿನಾಯಿತಿ
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ಜನರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಇಂದು ಒಟ್ಟು 80 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ವಿಟ್ಲ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದ್ದು, ಪ್ರತಿದಿನ ಪೇಟೆಗೆ ಬರುವ ಜನರನ್ನು ವಿಟ್ಲ ಪೇಟೆಯ ಪ್ರವೇಶ ಸ್ಥಳವಾದ ನಾಡಕಚೇರಿ, ಮೇಗಿನಪೇಟೆ, ಬೊಬ್ಬೆಕೇರಿ, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ವಿಟ್ಲ
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ವಿಟ್ಲ ಪೇಟೆ ಸೇರಿದಂತೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿದೆ. ಈ ಬಗ್ಗೆ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಟಾಸ್ಕ್ ಪೋರ್ಸ್ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ವಾರದ ಶನಿವಾರ ಮತ್ತು ಭಾನುವಾರ