Home Posts tagged #vittal

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತ್ಯು

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.

ವಿಟ್ಲ: ಚಾಲಕನ ನಿಯಂತ್ರ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಕೋಳಿ ಸಾಗಾಟದ ಲಾರಿ ರಸ್ತೆಗೆ ಪಲ್ಟಿ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ನಡೆದಿದೆ.ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಲಿಸುತ್ತಿದ್ದ ರಸ್ತೆಗೆ ಉರುಳಿದೆ. ಘಟನೆ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೋಳಿಗಳು ರಸ್ತೆಗೆ ಉರುಳಿ ಬಿದ್ದಿದ್ದು, ಅದನ್ನು ಬೇರೆ ವಾಹನಕ್ಕೆ ತುಂಬಿಸಲಾಗಿದೆ.

ವಿಟ್ಲ : ಬಾಲವಿಕಾಸದಲ್ಲಿ ಮಕ್ಕಳ ದಿನದ ಸಂಭ್ರಮಾಚರಣೆ

ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯoತ ಸಂಭ್ರಮದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ ಇವರು ಮಾತನಾಡಿ, “ಸತತ ಪ್ರಯತ್ನದಿಂದ ಸಾಧನೆ ಸಾಧ್ಯ. ಮಕ್ಕಳ ದಿನಾಚರಣೆ ಎಂಬುದು ಒಂದು ಸಾಮೂಹಿಕ ಹುಟ್ಟುಹಬ್ಬ. ಪಂಡಿತ್ ಜವಾಹರ್ ಲಾಲ್ ನೆಹರೂರವರ ಜೀವನಾದರ್ಶಗಳನ್ನು ಮಕ್ಕಳು ಮೈಗೂಡಿಸಿಕೊಂಡಾಗ ಮಕ್ಕಳ ದಿನದ

ವಿಟ್ಲ: ಉಡುಪಿ-ಕಾಸರಗೋಡು ವಿದ್ಯುತ್ ಪ್ರಸರಣ ಕಾಮಗಾರಿ: ವಿಟ್ಲದಲ್ಲಿ ಕಾಮಗಾರಿ ಮುಂದುವರಿಸಲು ಬಿಡುವುದಿಲ್ಲ: ಸಂಜೀವ ಮಠಂದೂರು

ವಿಟ್ಲ: ಉಡುಪಿ ಕಾಸರಗೋಡು 400 ಕೆ ವಿ. ವಿದ್ಯುತ್ ಪ್ರಸರಣ ಕಾಮಗಾರಿಯನ್ನು ಮತ್ತೆ ವಿಟ್ಲದಲ್ಲಿ ಆರಂಭಿಸಲು ಪ್ರಯತ್ನಿಸಿದ್ದು ಇದನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. ವಿಟ್ಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕೆಟಿಎಲ್ ಗುತ್ತಿಗೆ ನೀಡಿ ಸ್ಟರ್ಲೈಟ್ ಕಂಪೆನಿ ಸ್ಥಳ ಸರ್ವೇ ಮೂಲಕ ವಿದ್ಯುತ್ ಲೈನ್ ಅಳವಡಿಕೆಯ ಕಾರ್ಯಾರಂಭಕ್ಕೆ ಮುಂದಾಗಿದೆ ಇದನ್ನು ವಿರೋಧಿಸುವುದಾಗಿ ತಿಳಿಸಿದರು. ಯೋಜನೆ ಕೇಂದ್ರ

ವಿಟ್ಲ ;ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ

ವಿಟ್ಲ : ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ. ಬೊಳಂತಿಮೊಗರು ನಿವಾಸಿ ಬೈಕ್ ಸವಾರ ಅಬ್ದುಲ್ ಆಸೀಫ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಹ ಸವಾರ ಇಮ್ರಾನ್ ಅಪಾಯದಿಂದ ಪಾರಾಗಿದ್ದಾರೆ. ಇವರು ವಿಟ್ಲ ಕಡೆಯಿಂದ ಕಂಬಳಬೆಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ವಿಟ್ಲ: ಸಿಡಿಲು ಬಡಿದು ತೆಂಗಿನ ಮರ ಬೆಂಕಿಗಾಹುತಿ

ವಿಟ್ಲ: ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ಬುಡೋಳಿ ಜಂಕ್ಷನ್ ನಲ್ಲಿ ನಡೆದಿದೆ.ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ಪರಿಣಾಮವಾಗಿ ತೆಂಗಿನ ಮರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಲ್ಲದೆ, ಮರ ಸುಟ್ಟು ಹೋಗಿದೆ.ಮನೆಯಂಗಳದಲ್ಲಿ ತೆಂಗಿನ ಮರ ಇದೆಯಾದರೂ ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ. ಇದರ ಪಕ್ಕದಲ್ಲೇ ಇವರಿಗೆ

ವಿಟ್ಲ: 40 ಅಡಿ ಅಳದ ಹೊಳೆಗೆ ಬಿದ್ದ ವ್ಯಕ್ತಿಯ ರಕ್ಷಣೆ

ವಿಟ್ಲ: ಬೈಕ್ ಸೇತುವೆಗೆ ಡಿಕ್ಕಿ ಸವಾರ 40 ಅಡಿ ಆಳದ ಹೊಳೆಗೆ ಬಿದ್ದಿದ್ದು, ಸ್ಥಳೀಯ ಮುಸ್ಲಿಂ ಯುವಕರು ರಕ್ಷಣೆ ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಪಾಕ ಪ್ರವೀಣ ಹರ್ಷವರ್ಧನ ಭಟ್(55) ಅವರು ಕಾರ್ಯನಿಮಿತ್ತ ಶನಿವಾರ ಮುಂಜಾನೆ 4ಗಂಟೆ ಸುಮಾರಿಗೆ ತನ್ನ ಬೈಕಿನಲ್ಲಿ ವಿಟ್ಲ ಕಡೆ ಹೊರಟಿದ್ದರು. ವಿಟ್ಲ-ಸಾಲೆತ್ತೂರು ರಸ್ತೆಯ ಕೊಡಂಗಾಯಿ ಸೇತುವೆಯ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಹರ್ಷವರ್ಧನ

ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್‍ನಿಂದ ಸಾರ್ವಜನಿಕ ಗಣೇಶೋತ್ಸವ ಆಚರಣೆ

ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ ಸಮಿತಿ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಉದ್ಘಾಟನೆಗೊಂಡಿತು. ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸರಸ್ವತಿ ಸ್ವಾಮೀಜಿ ಉದ್ಘಾಟಿಸಿ, ಆಶೀರ್ವಚನ ನೀಡಿದರು. ಭಕ್ತರ ಸತ್ಸಂಕಲ್ಪಕ್ಕೆ ದೇವರ ಅನುಗ್ರಹ ಸದಾ ಇದೆ. ಧಾರ್ಮಿಕ ಕಾರ್ಯಕ್ರಮಗಳು ಬದುಕಿನ ಸಂಸ್ಕಾರ – ಸಂಸ್ಕೃತಿಯ ಉದ್ದೀಪನಕ್ಕೆ ಪೂರಕವಾಗಿದೆ.

ವಿಟ್ಲ: ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದ ಸಮುದಾಯ ಭವನಕ್ಕೆ ಶಿಲಾನ್ಯಾಸ

ದಕ್ಷಿಣ ಕನ್ನಡ ಜಿಲ್ಲೆಗೆ ಗೃಹ ಲಕ್ಷ್ಮಿ ಯೋಜನೆಗಾಗಿ 60ಕೋಟಿ ರೂಪಾಯಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ತುಂಬುವ ಮೂಲಕ ಕುಟುಂಬವನ್ನು ಸದೃಢವಾಗಿಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದಲ್ಲಿ ಸಮುದಾಯ ಭವನದ ಶಿಲಾನ್ಯಾಸವನ್ನು ನಡೆಸಿ ಮಾತನಾಡಿದರು. ಕ್ರೈಸ್ತ ಅಕಾಡೆಮಿಯ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಚರ್ಚ್ ಬಳಿಯ ಇಂಟರ್ ಲಾಕ್ ಅಳವಡಿಕೆಗೆ ಹಾಗೂ ಸಮುದಾಯ ಭವನಕ್ಕೆ

ವಿಟ್ಲ: ಅನುದಾನ ಹಂಚಿಕೆಯಲ್ಲಿ ಬಿಜೆಪಿ ಸದಸ್ಯರ ಕಡೆಗಣನೆ-ಧರಣಿ

ವಿಟ್ಲ: ನಗರೋತ್ಥಾನ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನ ಹಂಚಿಕೆಯಲ್ಲಿ ಬಿಜೆಪಿ ಬೆಂಬಲಿತ 12 ಮಂದಿ ಸದಸ್ಯರನ್ನು ಕಡೆಗಣಿಸಲಾಗಿದೆ. ಶಾಸಕರು ಅನುದಾನವನ್ನು ಎಲ್ಲರಿಗೂ ಸಮನಾಗಿ ಹಂಚಬೇಕು ಎಂದು ಆಗ್ರಹಿಸಿ ಸೆ.7ರಂದು ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಧರಣಿಯನ್ನು ನಡೆಸುವ ಮೂಲಕ ನ್ಯಾಯವನ್ನು ಯಾಚಿಸಲಿದ್ದೇವೆ. ಸ್ಥಳಕ್ಕೆ ಯೋಜನಾ ನಿರ್ದೇಶಕರು ಹಾಗೂ ಆಡಳಿತಾಧಿಕಾರಿಗಳು ಆಗಮಿಸಿ ಮನವಿಯನ್ನು ಸ್ವೀಕಾರ ಮಾಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಅರುಣ್ ಎಂ. ವಿಟ್ಲ