ಯೆನೆಪೋಯ ಆಸ್ಪತ್ರೆಯಿಂದ ಎದೆಗೂಡಿನ ಅಪರೂಪದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸರ್ಜಿಕಲ್ ಆಂಕೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ೩೨ ವರ್ಷದ ಶ್ವೇತಾ ಎಂಬ ಮಹಿಳೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು.
ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ (80) ಅವರಿಗೆ ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ತಡರಾತ್ರಿ 12ರಿಂದ ಆರಂಭವಾದ ಶಸ್ತ್ರ ಚಿಕಿತ್ಸೆಯು ನಸುಕಿನ ಜಾವ 5.30 ರವರೆಗೂ ನಡೆಯಿತು. ಯೆನೆಪೊಯ ಆಸ್ಪತ್ರೆಯ ನ್ಯೂರಾಲಜಿಸ್ಟ್ ಡಾ.ದಿವಾಕರ್ ರಾವ್, ಎ.ಜೆ. ಆಸ್ಪತ್ರೆಯ