ಫೆ.24 : ತಲಪಾಡಿಯಲ್ಲಿ ನಿರ್ಮಿಸಲಾದ ಸಮಗ್ರ ಚೆಕ್‍ಪೋಸ್ಟ್ ಉದ್ಘಾಟನೆ
ಮಂಜೇಶ್ವರ: ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಕಾಸರಗೋಡು ವಿಭಾಗದ ತಲಪ್ಪಾಡಿಯಲ್ಲಿ ಜಿಲ್ಲಾ ಗಡಿಯಲ್ಲಿ ನಿರ್ಮಿಸಲಾದ ಸಮಗ್ರ ಚೆಕ್ ಪೋಸ್ಟ್ ಕಟ್ಟಡವನ್ನು ಫೆಬ್ರವರಿ 24 ರಂದು ಬೆಳಿಗ್ಗೆ 10 ಗಂಟೆಗೆ ಅರಣ್ಯ ಮತ್ತು ವನ್ಯಜೀವಿ ಇಲಾಖೆ ಸಚಿವ ಎ.ಕೆ.ಸಶೀಂದ್ರನ್ ಉದ್ಘಾಟಿಸಲಿದ್ದಾರೆ.
ರಾಜ್ಯ ಸರ್ಕಾರದ 100 ದಿನಗಳ ಕ್ರಿಯಾ ಚಟುವಟಿಕೆಗಳ ಕಾರ್ಯಕ್ರಮದ ಭಾಗವಾಗಿ ಕಟ್ಟಡ ಲೋಕಾರ್ಪಣೆಯಾಗುತ್ತಿದೆ. ಶಾಸಕ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆ ವಹಿಸುವ ಕಾರ್ಯಕ್ರಮದಲ್ಲಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕರಾದ ಎನ್.ಎ.ನೆಲ್ಲಿಕುನ್ನು, ಸಿ.ಎಚ್.ಕುಂಜಂಬು, ಇ.ಚಂದ್ರಶೇಖರನ್, ಎಂ.ರಾಜಗೋಪಾಲನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಇತರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.