ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ
ಸುಬ್ರಹ್ಮಣ್ಯ : ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯಕ್ ಅವರ ನೇತೃತ್ವ ದಲ್ಲಿ ನಡೆಯಲಿರುವ ಗ್ರಾಮ ವಿಕಾಸಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಿಮಿಸಿರುವ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದರು. ದೇವಳದ ಆಡಳಿತಮಂಡಳಿ ಸದಸ್ಯರು ಮತ್ತು ಬಿಜೆಪಿ ಪಕ್ಷದ ಸ್ಥಳೀಯ ನಾಯಕರು ಮಾಜಿ ಸೂಪರ್ ಕಾಪ್ ಅಣ್ಣಾಮಲೈ ಅವರು ಆದರದಿಂದ ಬರಮಾಡಿಕೊಂಡರು. ಅಣ್ಣಾ ಮಲೈ ನೋಡಿದ ಜನ ಅಟೋಗ್ರಾಫ್ ಮತ್ತು ಸೆಲ್ಫಿಗಾಗಿ ಮುಗಿಬಿದ್ದಿದ್ದರು.