ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು ಹಳೆಯಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗುರು ವಂದನೆ ಕಾರ್ಯಕ್ರಮ

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು, ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ಭಾರತ ರತ್ನ ದಿ. ಸರ್ವಪಳ್ಳಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನೆ ಕಾರ್ಯಕ್ರಮವನ್ನು ಫೇಮಸ್ ಯೂತ್ ಕ್ಲಬ್ಬಿನ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮಾ ಚಂದ್ರಶೇಖರ್ ರವರು ವಹಿಸಿ ಮಾತನಾಡಿ ಶಿಕ್ಷಕ ವೃತ್ತಿ ಎಂಬುದು ಅತ್ಯಂತ ಶ್ರೇಷ್ಠ ವೃತ್ತಿ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬೈಕಂಪಾಡಿ ಅಧ್ಯಕ್ಷರಾದ ರೋ. ಹರೀಶ್ ಬಿ ಶೆಟ್ಟಿಯವರು ಮಾತನಾಡಿ ಮನುಷ್ಯನ ಭವ್ಯ ಬದುಕನ್ನು ರೂಪಿಸುವ ರೂವಾರಿಗಳು ಶಿಕ್ಷಕರು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ 10ನೇ ತೋಕೂರು ಗ್ರಾಮದ ನಿವೃತ್ತ ಅಂಗನವಾಡಿ ಶಿಕ್ಷಕರಾದ ಶ್ರೀಮತಿ ಎಚ್. ರಾವ್ ಹಾಗೂ ನಿವೃತ್ತ ಶಿಕ್ಷಕಿಯಾದ ಶ್ರೀಮತಿ ಸುಂದರಿ ಕಿಟ್ಟ ಯು ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಬೈಕಂಪಾಡಿ ಕಾರ್ಯದರ್ಶಿ ರೊ. ಕಶ್ಯಪ್ ಪ್ರಭು, ವಲಯ ಸೇನಾನಿ ರೊ. ಗಣೇಶ್ ಎಂ, ನಿಕಟ ಪೂರ್ವ ಅಧ್ಯಕ್ಷರಾದ ರೊ. ಸುಧಾಕರ್ ಸಾಲ್ಯಾನ್, ಮತ್ತು ರೊ. ದಿನೇಶ್ ಎಲ್ ಬಂಗೇರ, ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್. ಪೂಜಾರಿ, ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರು, ಮಹಿಳಾ ಅಧ್ಯಕ್ಷರಾದ ಶ್ರೀಮತಿ ಪ್ರೇಮಲತಾ ಯೋಗೀಶ್ ರವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರು ರವರು ಸ್ವಾಗತಿಸಿ, ಮಹಿಳಾ ಮಂಡಲದ ಸದಸ್ಯೆ ಮನೋರಮಾ ರವರು ಪ್ರಾರ್ಥಿಸಿ, ಕಾರ್ಯದರ್ಶಿ ಹಿಮಕರ್ ರವರು ವಂದನಾರ್ಪಣೆಯನ್ನು ಸಲ್ಲಿಸಿದರು, ಸಂಪತ್ ಜೆ ಶೆಟ್ಟಿಯವರು ಕಾರ್ಯಕ್ರಮವನ್ನು ನಿರೂಪಿಸಿದರು.

add - Anchan ayurvedic

Related Posts

Leave a Reply

Your email address will not be published.