ತೆಂಕ ಎರ್ಮಾಳು ಅಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಮುಕ್ತಾರ್
ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಮುಕ್ತಾರ್ ಅಹಮದ್ ಆಯ್ಕೆಯಾಗಿದ್ದಾರೆ.ಗೌರವ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್, ಉಪಾಧ್ಯಕ್ಷರಾಗಿ ರಾಜು ಪೂಜಾರಿ, ಕಾರ್ಯದರ್ಶಿಯಾಗಿ ಭರತ್ ಜಿ. ಶೆಟ್ಟಿಗಾರ್, ಕೋಶಾಧಿಕಾರಿಯಾಗಿ ಶೇಕ್ ಲಿಯಾಕತ್, ಉಪ ಕೋಶಾಧಿಕಾರಿಯಾಗಿ ಅಬ್ದುಲ್ ನದೀಮ್ ಇವರನ್ನು ಅಟೋ ರಿಕ್ಷಾ ಚಾಲಕ ಮಾಲಕ ಸಂಘದ ವಾರ್ಷಿಕ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.