ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ -ಕಂಟೈನರ್,ಇನ್ನೋವಾ ಡಿಕ್ಕಿ- ತಾಯಿ, ಮಗ ದುರ್ಮರಣ

ನೆಲ್ಯಾಡಿ: ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಕೆಂಪುಹೊಳೆ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ತಾಯಿ ಸಪೀಯಾ, ಮಗ ಸಫೀಕ್ ಎಂದು ಗುರುತಿಸಲಾಗಿದೆ.

ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಕಾರು ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪಿಸುತ್ತಿದ್ದಂತೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಈ ಪೈಕಿ ಗಂಭೀರ ಗಾಯಗೊಂಡಿದ್ದ ತಾಯಿ, ಮಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತಪಟ್ಟಿರುವ ಶಫೀಕ್ ಕಾರು ಚಲಾಯಿಸುತ್ತಿದ್ದರು. ಇವರು ಮಂಗಳೂರಿನ ಕೊಣಾಜೆಯ ಪಿ ಎ ಇಂಜಿನಿಯರಿಂಗ್ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿ. ಇವರ ತಾಯಿ ಸಫಿಯಾ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Related Posts

Leave a Reply

Your email address will not be published.