ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮನ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಭೇಟಿ ನೀಡಿದರು.ಅವರಿಗೆ ಆಶ್ಲೇಷ ವಸತಿ ಗೃಹದ ಎದರು ಭಾಗದಲ್ಲಿ ಗೌರವವಂದನೆ ಸಲ್ಲಿಸಲಾಯಿತು. ಸಚಿವ ಎಸ್. ಅಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೆÇಲೀಸ್ ಆಯುಕ್ತ ಹೃಷಿಕೇಶ್ ಸೋನಾವಾಣೆ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ದ.ಕ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಕುಮಾರ್, ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದು ಸ್ವಾಗತಿಸಿದರು.