ತಮಿಳಿನಾಡಿನ ತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ಮೋದಿ ಭೇಟಿ
ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ “ದಿ ಎಲಿಫೆಂಟ್ ವಿಸ್ಪರರ್ಸ್’ನ ಪ್ರಮುಖ ಪಾತ್ರಧಾರಿ ಗಳಾದ ಕಾವಾಡಿ ದಂಪತಿ ಬೊಮ್ಮನ್ ಮತ್ತು ಬೆಳ್ಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಮೈಸೂರಿನಲ್ಲಿ ಭಾನುವಾರ ನಡೆದ `ಪ್ರಾಜೆಕ್ಟ್ ಟೈಗರ್’ 50 ವರ್ಷಗಳನ್ನು ಪೂರೈಸಿದ ಸಮಾರಂಭದಲ್ಲಿ, ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರವು ಪ್ರಕೃತಿ ಮತ್ತು ಜೀವಿಗಳ ನಡುವಿನ ಅದ್ಭುತ ಸಂಬಂಧದ ನಮ್ಮ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಬುಡಕಟ್ಟು ಸಮಾಜದ ಜೀವನ ಮತ್ತು ಸಂಪ್ರದಾಯದಿಂದ ಏನನ್ನಾದರೂ ತೆಗೆದುಕೊಳ್ಳುವಂತೆ ನಾನು ನಿಮ್ಮನ್ನು (ವಿದೇಶಿ ಗಣ್ಯರು) ಒತ್ತಾಯಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಪ್ರಧಾನಿ ಮೋದಿ ಅವರು ಮರಿ ಆನೆಗಳಿಗೆ ಕಬ್ಬನ್ನು ತಿನ್ನಿಸಿದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗುತ್ತಿವೆ. ಅದ್ಭುತವಾದ ಬೊಮ್ಮನ್ ಮತ್ತು ಬೆಳ್ಳಿಯವರನ್ನು ಭೇಟಿಯಾಗಿ ಬಹಳಷ್ಟು ಸಂತೋಷವಾಗಿದೆ ಎಂದರು. ಪ್ರಧಾನಿ ಹುಲಿ ಸಂರಕ್ಷಿತ ಪ್ರದೇಶಗಳ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿದರು.