ತೊಕ್ಕೊಟ್ಟು : ಸ್ಕೂಟರ್ ನಿಂದ ಬಿದ್ದು ಮಹಿಳೆ ಸಾವು

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು‌ ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ‌ ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಭಾನುವಾರ ಮಧೂರಿನಿಂದ ಕುಟುಂಬದ ಮನೆ ಪಿಲಾರು ಅರಮನೆಯಲ್ಲಿ‌ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ ತೊಕ್ಕೊಟ್ಟು ಜಂಕ್ಷನ್ ಗೆ ತೆರಳಿದವರು, ಜಪ್ಪಿನ ಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ವಾಪಾಸ್ ತೊಕ್ಕೊಟ್ಟು ಕಡೆ ಬರುವಾಗ ಈ ಅವಘಡ ಸಂಭವಿಸಿದೆ‌.

ತೊಕ್ಕೊಟ್ಟು ಜಂಕ್ಷನ್ ಬದಲು ಕೋಟೆಕಾರು ಬೀರಿವರೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ‌ ತೊಕ್ಕೊಟ್ಟು ಪ್ಲೈಓವರ್ ಸಂಪರ್ಕಿಸುವ ಕೆರೆಬೈಲು ನಾಗನ ಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್ ನಿಂದ ಸುಮಾ ಉರುಳಿ ಬಿದ್ದಿದ್ದಾರೆ. ತಕ್ಷಣ ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Related Posts

Leave a Reply

Your email address will not be published.