ವಿಶ್ವ ತುಳು ಲಿಪಿ ದಿನದ ಅಂಗವಾಗಿ ತುಳು ದಿಬ್ಬಣ ಕಾರ್ಯಕ್ರಮ
ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ ‘ತುಳು ದಿಬ್ಬಣ’ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಮಾತನಾಡಿ, ಇಂದು ನಾವು ಮಲಯಾಳಂಗೆ ತುಳುಲಿಪಿಯನ್ನು ಮಾರುವ ಕಾಲ ಬಂದಿದೆ. ಆದರೆ, ಮಲಯಾಳಂಗೆ ಲಿಪಿಯನ್ನು ನೀಡಿರುವ ಭಾಷೆ ತುಳು ಎಂದು ಹೇಳಲು ನಮಗೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.