ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲ ಉಚ್ಚಿಲ ದಸರಾ : ಡಾ.ಜಿ.ಶಂಕರ್ ಅವರಿಂದ ಉದ್ಘಾಟನೆ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಈ ಬಾರಿ ಅದ್ದೂರಿಯಾಗಿ ನಡೆಯಲಿರುವ ಉಚ್ಚಿಲ ದಸರಾ ಉತ್ಸವ-2022ರ ಅಂಗವಾಗಿ ದೇವಳದ ಪರಿಸರ ಮತ್ತು ಹೆಜಮಾಡಿಯಿಂದ ಕಾಪು ದೀಪಸ್ಥಂಭದವರೆಗೆ ನಿರ್ಮಿಸಲಾದ ಭವ್ಯವಾದ ವಿದುದ್ದೀಪಾಲಂಕಾರ ವ್ಯವಸ್ಥೆಯನ್ನು ಶ್ರೀ ಕ್ಷೇತ್ರದ ಸ್ವಾಗತ ಗೋಪುರ ಬಳಿ ದೇವಳದ ಗೌರವ ಅಧ್ಯಕ್ಷ ಡಾ.ಜಿ.ಶಂಕರ್ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ರಾಜ್ಯಕ್ಕೇ ಮಾದರಿಯಾಗಿ ಅತ್ಯಂತ ವೈಭವದಿಂದ ಉಚ್ಚಿಲ ದಸರಾ ನಡೆಯಲಿದ್ದು, ನಾಡಿನೆಲ್ಲೆಡೆಯಿಂದ ಲಕ್ಷಾಂತರ ಭಕ್ತರು ಅಗಮಿಸಲಿದ್ದಾರೆ.ದಸರಾ ಮಹೋತ್ಸವಕ್ಕೆ ಅಗಮಿಸುವ ಭಕ್ತರಿಗೆ ಸಕಲ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಸುಭಾಷ್ಚಂದ್ರ ಕಾಂಚನ್, ಪ್ರಧಾನ ಕಾರ್ಯದರ್ಶಿ ಸುಧಾಕರ ಎ. ಕುಂದರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ.ಅಮೀನ್, ಕ್ಷೇತ್ರಾಧ್ಯಕ್ಷ ವಾಸುದೇವ ಸಾಲ್ಯಾನ್, ಸದಸ್ಯರಾದ ಗಂಗಾಧರ ಸುವರ್ಣ ಎರ್ಮಾಳ್, ರವೀಂದ್ರ ಶ್ರೀಯಾನ್, ಶ್ರಿಪತಿ ಭಟ್, ಸತೀಶ್ ಅಮೀನ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಪ್ರಾರ್ಥನೆ ಸಲ್ಲಿಸಿದರು.