ಉಚ್ಚಿಲ : ಕಾರು ಡಿಕ್ಕಿ ಹೊಡೆದು ಗಂಭೀರ ಗಾಯ- ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟ ವೃದ್ಧ

ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ಧ ಅವರು ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ಎಂಬಲ್ಲಿ ನಡೆದಿದೆ.ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ(82) ಮೃತ ದುರ್ಧೈವಿ ಆಗಿದ್ದು, ಶುಕ್ರವಾರ ಸಂಜೆ ರಸ್ತೆ ದಾಟುತ್ತಿರುವಾಗ ಕೇರಳಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ನಾರಾಯಣ ಪೂಜಾರಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಲಕಾರಿಯಾಗಿದೆ ವೃದ್ಧರು ನಿನ್ನೆ ಮುಂಜಾನೆ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

ಈ ಸಂಬoಧ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವಘಡ ನಡೆಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
