ಉಡುಪಿ : 75 ಕಿ.ಮೀ. ಮ್ಯಾರಥಾನ್ ಓಟ ಅಗ್ನಿಪಥ್ ದೌಡ್
ಉಡುಪಿ ಜಿಲ್ಲಾ ರಜತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಜೊತೆಯಲ್ಲಿ ಯುವ ಜನತೆಯನ್ನು ಸೈನ್ಯಕ್ಕೆ ಸೇರಲು ಅಗ್ನಿಪಥ್ ಯೋಜನೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಮತ್ತು ಟೀಮ್ ನೇಶನ್ ಫಸ್ಟ್ ಸಹಭಾಗಿತ್ವದಲ್ಲಿ, ಶಾಸಕರಾದ ರಘುಪತಿ ಭಟ್ ನೇತೃತ್ವದಲ್ಲಿ ಆಯೋಜಿಸಿರುವ 75 ಕೀ.ಮೀ. ಮ್ಯಾರಥಾನ್ ಓಟ “ಅಗ್ನಿಪಥ್ ದೌಡ್” ಇಂದು ಕಾರ್ಕಳ ಭುವನೆಂದ್ರ ಕಾಲೇಜಿನಿಂದ ಆರಂಭಗೊಂಡಿತು.ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ವಿ. ಸುನೀಲ್ ಲ್ ಕುಮಾರ್ ಅವರೊಂದಿಗೆ ಶಾಸಕ ರಘುಪತಿ ಭಟ್ ಅವರು “ಅಗ್ನಿಪಥ್ ದೌಡ್” ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕಾರ್ಕಳ ಪುರಸಭೆ ಅಧ್ಯಕ್ಷರಾದ ಶ್ರೀಮತಿ ಸುಮಾ ಕೇಶವ್, ಕಾರ್ಕಳ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ರೂಪಾ ಡಿ ಶೆಟ್ಟಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೋಷನ್ ಶೆಟ್ಟಿ, ಭುವನೇಂದ್ರ ಕಾಲೇಜು ಪ್ರಾಂಶುಪಾಲರಾದ ಮಂಜುನಾಥ್ ಕೋಟ್ಯಾನ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ, ಟೀಮ್ ನೇಶನ್ ಫಸ್ಟ್ ಉಡುಪಿ ಅಧ್ಯಕ್ಷರಾದ ಸೂರಜ್ ಉಪಸ್ಥಿತರಿದ್ದರು.