ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆದಿದೆ. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೋಟಿ ಕಂಠ ಗಾಯನ ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ ಜರುಗಿತ್ತು. ಉಡುಪಿ ಅಪರ ಜಿಲ್ಲಾಧಿಕಾರಿಯಾದ ವೀಣಾ ಬಿ ಎಸ್, ವಿವಿಧ ಇಲಾಖೆಯ ಮುಖ್ಯಸ್ಥರು, ಜಿಲ್ಲಾ ಪಂಚಾಯತ್‍ಗಳು, ಒಟ್ಟು 37 ಇಲಾಖೆಗಳ ಅಧಿಕಾರಿಗಳು ಮತ್ತು ಮುಖ್ಯಸ್ಥರು, ಎನ್ ಎಸ್ ಎಸ್ ಶಿಬಿರದವರು, ಶಾಲಾ ಮಕ್ಕಳು, ಗಾಯನ ತಂಡದವರು ಹಾಗೂ ಪೋಲಿಸ್ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಅಪರ ಜಿಲ್ಲಾಧಿಕಾರಿಯಾದ ವೀಣಾ ಬಿ ಎಸ್, ಕನ್ನಡ ಭಾಷೆ ಮತ್ತು ಸಾಹಿತ್ಯದ ಮೌಲ್ಯಗಳನ್ನು ಹಾಡಿ ಹೊಗಳಿದರು.

ಕನ್ನಡ ಭಾಷೆ, ಸಂಸ್ಕøತಿಯ ಉಳಿವು ಮತ್ತು ಕನ್ನಡ ಮನಸುಗಳ ಜೋಡಿಸುವಿಕೆಯಂತಹ ಮೂಲ ಉದ್ದೇಶವನ್ನು ಹೊಂದಿರುವ ವಿಶೇಷವಾದ ಕಾರ್ಯಕ್ರಮವೇ ‘ಕೋಟಿ ಕಂಠ ಗಾಯನ’. ಈ ಕಾರ್ಯಕ್ರಮವು ರಾಜ್ಯದೆಲ್ಲೆಡೆ ಕನ್ನಡ ಭಾಷೆಯ ಮೇಲಿರುವ ಪ್ರೀತಿಯನ್ನು ಸಾರುವಂತ್ತಿತ್ತು.

Related Posts

Leave a Reply

Your email address will not be published.