ಉಡುಪಿ : ‘ಹಕುನ ಮಟಾಟ’ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಆಕಸ್ಮಿಕ ಅಗ್ನಿ ಅವಘಡ

ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರನಗರ ಸಮೀಪದಲ್ಲಿರುವ ‘ಹಕುನ ಮಟಾಟ’ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ‌ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ. ರೆಸ್ಟೋರೆಂಟ್ ನ ಕಿಚನ್ ರೂಮ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ತಗಲಿದ್ದು, ಅಪಾರ ಪ್ರಮಾಣದ ಉಪಕರಣಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

Related Posts

Leave a Reply

Your email address will not be published.