ಉಡುಪಿ : ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ
ಉಡುಪಿ: ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ, ಸಂವಿಧಾನ ವಿರೋಧಿ ನೀತಿ, ಹದಗೆಟ್ಟ ಕಾನೂನು ಸುವ್ಯವಸ್ಥೆ, ರೈತರ ಆತ್ಮಹತ್ಯೆ, ಬೆಲೆ ಏರಿಕೆ ವಿರುದ್ಧ ಜಿಲ್ಲಾ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತು. ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾದರು.
ಈ ವೇಳೆ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನಕಾರರು ಧಿಕ್ಕಾರ ಕೂಗಿದರು. ಬೆಂಗಳೂರಿನಲ್ಲಿ ಬಂಧಿತ ಶಂಕಿತ ಭಯೋತ್ಪಾದಕರ ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ ಮುಖಂಡರು, ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಅಪರಾಧಿಗಳು ರಾಜಾರೋಷವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.
ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ,ಮಾಜಿ ಸಚಿವ ಪ್ರಮೋದ್ ಮದ್ವರಾಜ್ ,ಶಾಸಕ ಯಶ್ಪಾಲ್ ಸುವರ್ಣ, ಮುಖಂಡರಾದ ಉದಯಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.