ಉಡುಪಿ: ಕೇರಳದಲ್ಲಿ ಬಾಂಬ್ ಸ್ಫೋಟ ವಿಚಾರ: ಕರಾವಳಿ ಗಡಿ ಭಾಗದಲ್ಲಿ ತೀವ್ರ ನಿಗಾ: ಗೃಹ ಸಚಿವ ಡಾ. ಜಿ. ಪರಮೇಶ್ವರ್
ಕೇರಳ ರಾಜ್ಯದ ಎರ್ನಾಕುಲಂನಲ್ಲಿ ಬಾಂಬ್ ಸ್ಫೋಟ ನಡೆದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೂಕ್ಷ್ಮವಾಗಿ ಗಮನಿಸಿದ್ದೇವೆ. ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗುಪ್ತಚರ ಇಲಾಖೆ ತೀವ್ರ ನಿಗಾ ಇರಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಬಾಂಬ್ ಸ್ಫೋಟದಂತಹ ಘಟನೆಗಳು ನಡೆಯಲು ಬಿಡಲ್ಲ. ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ಮೇಲೆ ಅನುಮಾನ ಬಂದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಆಪರೇಷನ್ ಕಮಲದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತದೆ ಎಂದು ಬಿಜೆಪಿ ಕಾಯ್ದುಕೊಂಡು ಇರಲಿ. ಇನ್ನು ಐದು ವರ್ಷ ಕಾದುಕೊಂಡಿರಲಿ ಎಂದು ರಾಜ್ಯದ ಜನರೇ ತೀರ್ಮಾನಿಸಿದ್ದಾರೆ. ಸರಕಾರದ ಅಧಿಕಾರ ಹಂಚಿಕೆ ಎರಡುವರೆ ವರ್ಷ, ಒಂದು ಕಾಲು ವರ್ಷ ಎಂದು ಮಾಧ್ಯಮಗಳು ಹೇಳುತ್ತವೆ. ನಮ್ಮಲ್ಲಿ ಯಾವುದೇ ಅಂತಹ ಚರ್ಚೆ ನಡೆದಿಲ್ಲ. ಎಲ್ಲಾ ಮಾಧ್ಯಮಗಳ ಸೃಷ್ಟಿ ಎಂದರು.
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಗೋಲ್ಮಾಲ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಅದು ಸಹಕಾರಿ ಸಂಸ್ಥೆಗೆ ಸೇರಿದ ಕಾರ್ಖಾನೆಯಾಗಿದೆ. ಸಹಕಾರಿ ಮತ್ತು ಸಕ್ಕರೆ ಸಚಿವರು ಈ ಬಗ್ಗೆ ಜಂಟಿಯಾಗಿ ತನಿಖೆ ಮಾಡುತ್ತಾರೆ. ಪೆÇಲೀಸ್ ತನಿಖೆಗೆ ಸೂಚನೆ ಬಂದರೆ ನಾವು ಮಾಡುತ್ತೇವೆ. ಸರ್ಕಾರ ಪೆÇಲೀಸ್ ಇಲಾಖೆಗೆ ತನಿಖೆಗೆ ಸೂಚಿಸಿದರೆ ಕ್ರಮ ಜರುಗಿಸುತ್ತೇವೆ. ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲೂ ತನಿಖೆ ಮಾಡುತ್ತಿದೇವೆ, ಬಸವನಾಡು ಮರುನಾಮಕರಣ ವಿಚಾರ ನನಗೆ ಗೊತ್ತಿಲ್ಲ ಎಂದರು.