ಉಡುಪಿ ; ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ – ಇಂದು ಅಂತ್ಯಕ್ರಿಯೆ
ಉಡುಪಿ: ನೇಜಾರು ಸಮೀಪದ ತೃಪ್ತಿ ನಗರದಲ್ಲಿ ನಿನ್ನೆ ಹತ್ಯೆಗೊಳಗಾದ ಒಂದೇ ಕುಟುಂಬದ ನಾಲ್ವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ಉಡುಪಿಯ ಜಾಮಿಯಾ ಮಸೀದಿ ಸಮೀಪದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನಿನ್ನೆ ರಾತ್ರಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆದಿದ್ದು, ಇಂದು ಆಸ್ಪತ್ರೆಯಿಂದ ಅಂತ್ಯಕ್ರಿಯೆಯ ಹಿನ್ನೆಲೆಯಲ್ಲಿ ತೆಗೆದುಕೊಂಡು ಬರಲಾಗಿದೆ.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಅವರು ತನಿಖೆಗಾಗಿ ಐದು ತಂಡಗಳನ್ನು ರಚಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದು, ಸಿಸಿ ಟಿವಿ ದೃಶ್ಯಾವಳಿಗಳ ಪರಿಶೀಲನೆ ಸೇರಿದಂತೆ ನಾನಾ ಅಯಾಮಗಳಲ್ಲಿ ತನಿಖೆ ನಡೆದಿದೆ.
ವ್ಯಕ್ತಿಯೋರ್ವ ಮಾಸ್ಕ್ ಧರಿಸಿ ಬೈಕ್ ನಲ್ಲಿ ತೆರಳಿರುವ ಸಿಸಿ ಟಿವಿ ದೃಶ್ಯಾವಳಿ ಲಭ್ಯವಾಗಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.