ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿಲ್ಲ, ಅಲ್ಟ್ರಾ ಎಕ್ಸ್ಟ್ರೀಮ್ ಎಡಪಂಥೀಯರು ಆಡಳಿತ ನಡೆಸುತ್ತಿದ್ದಾರೆ : ಉಡುಪಿಯಲ್ಲಿ ಬಿ.ಎಲ್ ಸಂತೋಷ್ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿಲ್ಲ. ಅಲ್ಟ್ರಾ ಎಕ್ಸ್ಟ್ರೀಮ್ ಎಡಪಂಥೀಯರು ಆಡಳಿತ ನಡೆಸುತ್ತಿದ್ದಾರೆ. ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಸಮಿತಿಯಲ್ಲಿ ಹಿಂದು ವಿರೋಧಿಗಳನ್ನೇ ತುಂಬಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಹೋಟೆಲ್ ಕಿದಿಯೂರಿನ ಮಾಧವ ಕೃಷ್ಣ ಸಭಾಂಗಣದಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯ ಶಿಕ್ಷಣ ನೀತಿ ಈವರೆಗೂ ಫಾರ್ಮ್ ಆಗಿಲ್ಲ. ರಾಜ್ಯ ಸರಕಾರದಲ್ಲಿ ತಾಳ ಮೇಳದ ಕೊರತೆ ಇದೆ. ಇಬ್ಬರಿಗೂ ಇಲ್ಲಿ ಅಧಿಕಾರದ ಆಸೆ ಇದೆ. ಒಬ್ಬರಿಗೆ ಸ್ಥಾನ ಉಳಿಸಿಕೊಳ್ಳುವ ಆಸೆಯಾದರೆ ಮತ್ತೊಬ್ಬರಿಗೆ ಅಲ್ಲಿ ಬಂದು ಕೂರುವ ಆಸೆ ಇದೆ. ನೇಹಾ ಪ್ರಕರಣ, ಉಡುಪಿ ಘಟನೆ, ರಾಮೇಶ್ವರಂ ಕೆಫೆ ಸ್ಪೋಟಗಳು ರಾಜ್ಯ ಸರಕಾರದ ವೈಫಲ್ಯಕ್ಕೆ ನಿದರ್ಶನವಾಗಿದೆ ಎಂದರು.

Related Posts

Leave a Reply

Your email address will not be published.