ಉಡುಪಿ: ಕ್ಯಾನ್ಸರ್ ಬಗ್ಗೆ ಜಾಗೃತಿ, ಜಲವರ್ಣ ಕಲಾಕೃತಿ
ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಬೃಹತ್ ಜಲವರ್ಣ ಕಲಾಕೃತಿಯು ರಚನೆಗೊಂಡಿದೆ.
ಕಲಾವಿದರಾದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೆಬೆಟ್ಟು ಅವರು ಡಾ. ರಂಜಿತಾ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಕೆಎಂಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಇಂಟರಾಕ್ಟ್ ಆವರಣದಲ್ಲಿ ಬೃಹತ್ ಜಲವರ್ಣ ಕಲಾಕೃತಿಯನ್ನು ರಚಿಸಿದರು. ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕಿಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಕಲಾಕೃತಿಯನ್ನು ಅನಾವರಣಗೊಳಿಸಿದರು. ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ಉಪಸ್ಥಿತರಿದ್ದರು.