ಉಡುಪಿ: ಏ.3ರಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಏಪ್ರಿಲ್ 3ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಜ್ ನಾಮಪತ್ರ ಸಲ್ಲಿಕೆಯ ನೇತೃತ್ವ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರಾದ ಹೆಚ್. ಡಿ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಟಿಡಿ ರಾಜೇಗೌಡ, ತರೀಕೆರೆ ಶಾಸಕ ಜಿ.ಹೆಚ್ ಶ್ರೀನಿವಾಸ್, ಎರಡು ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು , ಸ್ಥಳೀಯ ನಾಯಕರು ಭಾಗಿಯಾಗಲಿದ್ದಾರೆ. ಬೆಳಗ್ಗೆ 11ಕ್ಕೆ ಬ್ರಹ್ಮಗಿರಿ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ನಡೆಯಲಿದೆ.
