ಉಡುಪಿ : ಕಾಂಗ್ರೆಸ್ ಗ್ಯಾರಂಟಿ ಸಮಾವೇಶ
ಉಡುಪಿಯ ಮಹಾತ್ಮ ಗಾಂಧಿ ಮೈದಾನದಲ್ಲಿ ಗ್ಯಾರೆಂಟಿ ಸಮಾವೇಶದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಗ್ಯಾರಂಟಿ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಿಜೆಪಿಯವರು ಗ್ಯಾರೆಂಟಿ ಯೋಜನೆ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನೇರವಾಗಿ ಫಲಾನುಭವಿಗಳಿಗೆ ಪ್ರಯೋಜನ ತಿಳಿಸಲು ಈ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಜಿಲ್ಲಾ ಮಟ್ಟದಲ್ಲಿ ಅನುಷ್ಟಾನ ಸಮಿತಿ ರಚನೆ ಮಾಡಿದ್ದೇವೆ. ಎಲ್ಲಾ ಅರ್ಹರಿಗೆ ಗ್ಯಾರೆಂಟಿ ತಲುಪಬೇಕು. ಅಭಿವೃದ್ಧಿ ಕೆಲಸಕ್ಕೆ ದುಡ್ಡಿಲ್ಲ ಎಂದು ವಿಪಕ್ಷಗಳು ಹೇಳುತ್ತವೆ.
ಗ್ಯಾರಂಟಿ ಯೋಜನೆ ಆಗಲ್ಲ ಅಂತ ಪ್ರಧಾನಿ ಮೋದಿ ಹೇಳಿದ್ದರು. ಕರ್ನಾಟಕದ ಖಜಾನೆ ಖಾಲಿ ಆಗುತ್ತೆ ಎಂದಿದ್ದರು. ಪ್ರಧಾನಿಗಳೇ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ
ಈ ವರ್ಷ ಮೂವತ್ತಾರು ಸಾವಿರ ಕೋಟಿ ಖರ್ಚು ಮಾಡುತ್ತಿದ್ದೇವೆ. ಯಾವ ಕಾರಣಕ್ಕೂ ಶೋಭಾ ಕರಂದ್ಲಾಜೆಯನ್ನು ಗೆಲ್ಲಿಸಬೇಡಿ, ತೆರಿಗೆ ವಿಚಾರದಲ್ಲಿ ಅನ್ಯಾಯ ಆಗಿದೆ ಅಂತ ಶೋಭಾ ಮಾತನಾಡಿಲ್ಲ. ೭ಕೋಟಿ ಕನ್ನಡಿಗರಿಗೆ ಸಂಸದರು ದ್ರೋಹ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಯೋಜನೆಗಳ ಶಂಕುಸ್ಥಾಪನೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವ ಮಂಕಾಳ ವೈದ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಪ್ರಸಾದ್ ಕಾಂಚನ್, ಜಯಪ್ರಕಾಶ್ ಹೆಗಡೆ, ಮಮತಾ ಗಟ್ಟಿ, ಮುನಿಯಾಲು ಉದಯಕುಮಾರ್ ಶೆಟ್ಟಿ ಕಾಂಗ್ರೆಸ್ ಮುಖಂಡರು ವೇದಿಕೆಯಲ್ಲಿದ್ದರು.