ಉಡುಪಿ : ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮನೆಮನೆಗೆ ತೆರಳಿ ಮತಯಾಚನೆ
ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರದ ಹಾರಾಡಿ-ಹೊನ್ನಾಳ ವಾರ್ಡ್ ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಮನೆಮನೆಗೆ ತೆರಳಿ ಮತಯಾಚಿಸಿದರು. ಕಾಂಗ್ರೆಸ್ ಮುಂಖಡರಾದ ಅಲ್ತಾಫ್ ಅಹಮದ್ ನೇತೃತ್ವದಲ್ಲಿ ಪ್ರಸಾದ್ ರಾಜ್ ಕಾಂಚನ್ ಪರ ಮನೆಮನೆ ಪ್ರಚಾರ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.