ಜುಲೈ 7ರಂದು ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು ಕೆಲವೆಡೆ ಹಾನಿ ಸಂಭವಿಸಿದೆ. ಜುಲೈ 7 ರಂದು ಮಳೆ ಮುಂದುವರೆಯುವ ಮುನ್ಸೂಚನೆಯಿದ್ದು, ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಕೂಡ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯುತ್ತವೆ ಎಂದು ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮ ರಾವ್ ಮಾಹಿತಿಯನ್ನು ನೀಡಿದ್ದಾರೆ.