ಉಡುಪಿ : ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ
ದೃಷ್ಟಿ (ಪ್ರದಾನ ಯೋಜನೆ 2024 2025 ಕರ್ನಾಟಕ ಸರಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ನಾಡ, ಗ್ರಾಮ ಪಂಚಾಯತ್ ನಾಡ, ಶ್ರೀ ಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೋಟೆಲ್, ನಾಡ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸುಧಾಕರ ಪೂಜಾರಿ ಬೆಳ್ಳಾಡಿ ಹೊಸವಕ್ಲು ಮನೆ ಸಂಯೋಜನೆಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವು ಶ್ರೀ ಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೋಟೆಲ್ ನಾಡ ಐಟಿಐ ಮುಂಭಾಗದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ನಾಡ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಶಂಕರ್ ಶೆಟ್ಟಿ, ವೈದ್ಯಾಧಿಕಾರಿ ಡಾ.ಚಿಕ್ಮರಿ ಮತ್ತು ಸಿಬ್ಬಂದಿ ವರ್ಗ ಪ್ರಾಥಮಿಕ ಆರೋಗ್ಯ ನಾಡ,ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮ ಪಂಚಾಯತ್ ನಾಡ, ಶ್ರೀ ಮಹಾಗಣಪತಿ ಸೇವಾ ಸಮಿತಿ, ಗುಡ್ಡೆ ಹೋಟೆಲಿನ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಶರತ್ ಕುಮಾರ್ ಶೆಟ್ಟಿ,ನಾಡ ಪಂಚಾಯತಿನ ಮಾಜಿ ಅಧ್ಯಕ್ಷರಾ ರಾಜೀವ್ ಶೆಟ್ಟಿ,ಕೆನಡಿ ಪಿರೇರಾ, ಜಗನ್ನಾಥ ಸಾಲಿಯಾನ್, ಅರ್ಚಕರಾದ ಮಂಜುನಾಥ ಭಟ್,ಕಾಮೇಶ್ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.