ಉಡುಪಿ: ಜೂ.27ರಂದು ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ನಾಡ ಗ್ರಾಮ ಪಂಚಾಯತ್ ನಾಡ ಶ್ರೀ ಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೊಟೆಲ್ ನಾಡ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಸಂಯುಕ್ತ ಆಶ್ರಯದಲ್ಲಿ ಜೂನ್ 27ರಂದು ಬೆಳಿಗ್ಗೆ 9 ಗಂಟೆಯಿಂದ 12ರ ವರೆಗೆ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಿದ್ದಾರೆ.

ಶ್ರೀ ಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೊಟೇಲ್ ನಾಡ ಐಟಿಐ ಮುಂಭಾಗ ನೇತ್ರ ಪರೀಕ್ಷೆಯ ನಡೆಯಲಿದೆ. ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ಶಿರೂರು ಮುದ್ದುಮನೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9379404852 ಸಂಪರ್ಕಿಸಬಹುದು.