ಉಡುಪಿ: ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸದಿರಲಿ – ಜಗದೀಶ್ ಶೆಟ್ಟರ್

ಉಡುಪಿ : ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು. ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಹೇಳಿದರು.

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಆಯೋಜಿಸಿದ್ದ ಮಾಲಿನ್ಯ ನಿಯಂತ್ರಿತ ಕೈಗಾರೀಕರಣ ಹಾಗೂ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಜಗದೀಶ್ ಶೆಟ್ಟರ್ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಹಾಗೂ ಶಾಸಕ ಆರ್.ವಿ.ದೇಶಪಾಂಡೆ, ರಾಜ್ಯ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ನಾಗರಾಜ ಶೆಟ್ಟಿ , ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕ್ಯಾ.ಗಣೇಶ್ ಕಾರ್ಣಿಕ್, ಜಯಶ್ರೀಕೃಷ್ಣ ಪರಿಸರ ಸಮಿತಿಯ ಸ್ಥಾಪಕ ಅಧ್ಯಕ್ಷ ತೋನ್ಸೆ ಜಯಕೃಷ್ಣ ಶೆಟ್ಟಿ ಸಮಿತಿಯ ಅಧ್ಯಕ್ಷ ಎಲ್.ವಿ.ಅಮೀನ್ ಮೊದಲಾದವರು ಉಪಸ್ಥಿತರಿದ್ದರು.