ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ : ಬಂಡೆಗೆ ಬಡಿದ ದೋಣಿ
ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ ಉಂಟಾಗಿ, ಕಾಪು ಲೈಟ್ ಹೌಸ್ ತಲುಪುತ್ತಿದ್ದಂತೆ, ಬಂಡೆಗೆ ಬಡಿದಿದೆ. ಈ ವೇಳೆ ದೋಣಿ ಮಗುಚಿ ಬಿದಿದ್ದು, ಮೀನುಗಾರರು ಬೇರೆ ದೋಣಿಯವರ ಸಹಾಯದಿಂದ ಮಲ್ಪೆ ಬಂದರು ತಲುಪಿದ್ದಾರೆ. ದೋಣಿಗೆ ಹಾನಿಯಾಗಿ 15 ಲಕ್ಷ ರುಪಾಯಿ ನಷ್ಟವಾಗಿದೆ ಎನ್ನಲಾಗಿದೆ.