ರಾ.ಹೆ. 66ರಲ್ಲಿ ಲಾರಿ ಪಲ್ಟಿ : ಗೇರುಬೀಜಗಳು ದಿಕ್ಕಾಪಾಲು
ಉಡುಪಿ ಜಿಲ್ಲೆ : ಮಂಗಳೂರಿನಿಂದ ಗೇರು ಬೀಜ ಹೇರಿಕೊಂಡ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ, ಇಂದು ಉಡುಪಿ ಸಮೀಪದ ಬಲಾಯಿಪಾದೆ ಜಂಕ್ಷನ್ ನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆಯಿತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ ಎಂದು ತಿಳಿದು ಬಂದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮಗುಚಿ ಬಿದ್ದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಲಾರಿ ಮುಂಭಾಗಕ್ಕೆ ಹಾನಿಯಾಗಿದ್ದು, ಪಲ್ಟಿಯಾದ ರಭಸಕ್ಕೆ ಅಪಾರ ಪ್ರಮಾಣದ ಗೇರುಬೀಜ ರಸ್ತೆಯಲ್ಲಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.