ಉಡುಪಿ-ಮಣಿಪಾಲ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ
ಉಡುಪಿ : ಉಡುಪಿ ಜಿಲ್ಲೆಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯೆಲ್ಲೆಡೆ ವ್ಯಾಪಕ ಮಳೆಯಾಗುತ್ತಿದೆ. ನಿನ್ನೆಯಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆ ಬದಿಯಲ್ಲಿ ಗುಡ್ಡ ಜರಿತ ಉಂಟಾಗಿದೆ. ನಿರಂತರ ಮಳೆಯಿಂದ ಮಣ್ಣು ಹದಗೊಂಡು ಮಣಿಪಾಲದ ಏರು ಪ್ರದೇಶದಲ್ಲಿ ಗುಡ್ಡಗಳು ರಸ್ತೆಯ ಮೇಲೆ ಕುಸಿಯುತ್ತಿವೆ. ಜರಿಯುತ್ತಿರುವ ಗುಡ್ಡದ ಮೇಲೆ ಕಟ್ಟಡಗಳಿರುವುದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿಯುತ್ತಿದ್ದರೂ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾದಲ್ಲಿ ಈ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆಯಿದೆ.