ಉಡುಪಿ: ಹತ್ಯೆ ಪ್ರಕರಣ: ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಎಸ್ಪಿಗೆ ಅಭಿನಂದನೆ
ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಅಮಾನುಷ ಕೊಲೆಯನ್ನು ನಡೆಸಿದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹಾಗೂ ಅವರ ಸಮಸ್ತ ತಂಡಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.
ಸಾರ್ವಜನಿಕರಿಗೆ ಪೆÇಲೀಸ್ ಇಲಾಖೆಯ ಮೇಲೆ ವಿಶ್ವಾಸ ಕಳೆದುಕೊಳ್ಳದಂತೆ ಪ್ರಕರಣವನ್ನು ಅತ್ಯಂತ ಶೀಘ್ರವಾಗಿ ಭೇದಿಸಿ ಆರೋಪಿಯನ್ನು ಪತ್ತೆ ಹಚ್ಚಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾದ ಇಡೀ ಪೆÇಲೀಸ್ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.
ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಉಡುಪಿ ವಿಧಾನಸಭಾ ಕ್ಷೇತ್ರದ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ನಾಯಕರಾದ ಪ್ರಖ್ಯಾತ್ ಶೆಟ್ಟಿ, ಕುಶಲ್ ಶೆಟ್ಟಿ, ಗಣೇಶ್ ನೆರ್ಗಿ, , ಮಮತಾ ಶೆಟ್ಟಿ, ಸೌರಭ್ ಬಲ್ಲಾಳ್, ಯತೀಶ್ ಕರ್ಕೇರ, ಸುರೇಂದ್ರ ಮುಂತಾದವರು ಉಪಸ್ಥಿತರಿದ್ದರು.