ಉಡುಪಿ: ಹಿರಿಯ ನಟ ಮಂಡ್ಯ ರಮೇಶ್ ಅವರಿಗೆ ‘ಪಂಚಮಿ ಪುರಸ್ಕಾರ -2025’
ಉಡುಪಿ: ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಹೇಳಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪುರಸ್ಕಾರವು 1 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಪದಕವನ್ನು ಒಳಗೊಂಡಿದೆ. ಜನವರಿ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೆೈ, ಉಪಾಧ್ಯಕ್ಷರಾದ ನಾಗರಾಜ್ ಹೆಬ್ಬಾರ್, ವಿಘ್ನೇಶ್ವರ ಅಡಿಗ, ಪುರಸ್ಕಾರ ಸಮಿತಿಯ ಸಂಯೋಜಕ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.