ಉಡುಪಿ: ಹಿರಿಯ ನರರೋಗ ತಜ್ಞ ಡಾ.ರಾಜಾ ನಿಧನ

ಉಡುಪಿ ಆದರ್ಶ ಆಸ್ಪತ್ರೆಯ ವೈದ್ಯ ಹಾಗೂ ಹಿರಿಯ ನರರೋಗ ತಜ್ಞ ಡಾ.ರಾಜಾ ರವಿವಾರ ಹೃದಯಾಘಾತದಿಂದ ನಿಧನರಾದರು.

ಮಣಿಪಾಲದ ರಾಜೀವನಗರದ ಮನೆಯಲ್ಲಿ ಬೆಳಗ್ಗೆ ಹೃದಯಾಘಾತಕ್ಕೆ ಒಳಗಾದ ಇವರನ್ನು ಕೂಡಲೇ ಉಡುಪಿ ಆದರ್ಶ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Related Posts

Leave a Reply

Your email address will not be published.