ಉಡುಪಿ: ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 8.81 ಲಕ್ಷ ರೂ. ವಶಕ್ಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಕ್ರಮಗಳನ್ನು ತಡೆಯಲು ಕಟ್ಟೆಚ್ಚರ ವಹಿಸಲಾಗಿದ್ದು, ಕಳೆದ ಒಂದು ವಾರದಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಒಟ್ಟು 8.81ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 3.50ಲಕ್ಷ ರೂ., ಕಾಪು ವಿಧಾನಸಭಾ ಕ್ಷೇಕತ್ರದ ಉದ್ಯಾವರ ಚೆಕ್‌ಪೋಸ್ಟ್‌ನಲ್ಲಿ 4.51ಲಕ್ಷ ರೂ. ಹಾಗೂ ಮಾ.23ರಂದು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 80ಸಾವಿರ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು ನಾಲ್ಕು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಅಬಕಾರಿ ಇಲಾಖೆ 29 ಲೀಟರ್ ಹಾಗೂ ಪೊಲೀಸ್ ಇಲಾಖೆ 15ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಂಡಿದೆ. ಇದರ ಒಟ್ಟು ಮೌಲ್ಯ 30ಸಾವಿರ ರೂ. ಅಂದಾಜಿಸಲಾಗಿ೦ದೆ. ಅದೇ ರೀತಿ ಅಬಕಾರಿ ಇಲಾಖೆ 150 ಗ್ರಾಂ ಹಾಗೂ ಪೊಲೀಸರು 196ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಚೆಕ್‌ಪೋಸ್ಟ್‌ಗಳಲ್ಲಿ ಮಾರ್ಪಡು: ಜಿಲ್ಲೆಯ ಗಡಿಭಾಗಗಳಲ್ಲಿರುವ ಒಳ ರಸ್ತೆಗಳಲ್ಲಿಯೂ ಅಕ್ರಮವಾಗಿ ಹಣ, ಮದ್ಯ ಸಾಗಾಟ ದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಅದಕ್ಕಾಗಿ ಚೆಕ್‌ಪೋಸ್ಟ್‌ಗಳಲ್ಲಿ ಹಲವು ಮಾರ್ಪಡುಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ತಿಳಿಸಿದರು.

Related Posts

Leave a Reply

Your email address will not be published.