ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 5 ದಿನಗಳಿಗೊಮ್ಮೆಕುಡಿಯುವ ನೀರು ಪೂರೈಕೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ ನೀರಿನ ಶೇಖರಣೆ ತೀರಾ ಕಡಿಮೆ ಇರುವುದರಿಂದ 5 ದಿನಗಳಿಗೊಮ್ಮೆ , ಜೂನ್ 9, 14 ಮತ್ತು 19 ರಂದು ಪರ್ಕಳ, ಸೆಟ್ಟಿಬೆಟ್ಟು, ಅನಂತನಗರ, ಈಶ್ವರನಗರ, ವಿದ್ಯಾರತ್ನ ನಗರ, ಶೀಂಬ್ರ ಭಾಗಕ್ಕೆ, ಜೂನ್ 10, 15 ಮತ್ತು 20 ರಂದು ಇಂದಿರಾನಗರ ಟ್ಯಾಂಕ್, ಅಜ್ಜರಕಾಡು, ಎಸ್.ಪಿ ಟ್ಯಾಂಕ್, ಪುತ್ತೂರು ಟ್ಯಾಂಕ್, ಗೋಪಾಲಪುರ, ಮೂಡುಬೆಟ್ಟು, ಹನುಮಂತನಗರ ಟ್ಯಾಂಕ್‌ನಿಂದ ಹನುಮಂತನಗರಕ್ಕೆ ಹಾಗೂ ಜೂನ್ 12, 17 ಮತ್ತು 22 ರಂದು ಕಲ್ಮಾಡಿ, ಕೊಡವೂರು, ದೊಡ್ಡಣಗುಡ್ಡೆ, ಪುತ್ತೂರು ಟ್ಯಾಂಕ್‌ನಿಂದ ಸಂತೆಕಟ್ಟೆ, ಸುಬ್ರಹ್ಮಣ್ಯ ನಗರ ಮತ್ತು ಕೊಡಂಕೂರು ವಾರ್ಡ್ಗಳಿಗೆ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುವುದು.

ಹೊಂಡಗಳಿಂದ ನೀರನ್ನು ಪಂಪಿಂಗ್ ಮೂಲಕ ಸರಬರಾಜು ಮಾಡಲಾಗುತ್ತಿರುವುದರಿಂದ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ನಗರಸಭೆಯ ನೀರನ್ನು ಉಪಯೋಗಿಸುತ್ತಿದ್ದಲ್ಲಿ, ನೀರನ್ನು ಕುದಿಸಿ ಕುಡಿಯುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

Leave a Reply

Your email address will not be published.