ಉಡುಪಿ ಜಿಲ್ಲಾ ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾದಿಂದ ದಲಿತ ವಿರೋಧ ನೀತಿ ಖಂಡಿಸಿ ಪ್ರತಿಭಟನೆ
![udupi bjp protest](http://v4news.com/wp-content/uploads/2023/08/WhatsApp-Image-2023-08-10-at-11.29.15-1140x520.jpeg)
ಉಡುಪಿ ಜಿಲ್ಲೆಯ ಬಿಜೆಪಿ ಎಸ್‍ಸಿ ಮತ್ತು ಎಸ್.ಟಿ. ಮೋರ್ಚಾದ ವತಿಯಿಂದ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂಪಾಯಿ ಹಣವನ್ನು ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಉಡುಪಿಯ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಪ್ರತಿಭಟನೆಯಲ್ಲಿ ಬಿಜೆಪಿಯ ಪ್ರಮುಖರು ಪಾಲ್ಗೊಂಡಿದ್ದರು.