HomeFresh Newsಉದ್ಯಾವರ : ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ: ಪ್ರವಾಸಿಗರಿಗೆ ಗಾಯ

ಉದ್ಯಾವರ : ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ: ಪ್ರವಾಸಿಗರಿಗೆ ಗಾಯ

ರಾಷ್ಟೀಯ ಹೆದ್ದಾರಿ 66ರ ಇಕ್ಕೆಲಲ್ಲಿ ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.

ಕೊಲ್ಲೂರಿನತ್ತ ತೆರಳುತ್ತಿದ್ದ ಹೊರ ರಾಜ್ಯದ ಟೂರಿಸ್ಟ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ.

ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟೂರಿಸ್ಟ್ ವಾಹನ ಮುಂಭಾಗ ತೀವೃ ಜಖಂ ಗೊಂಡಿದೆ.ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

add - BDG
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments