ಉಳಿಯಾರಗೋಳಿ : ಟ್ಯೂಬ್ ಮೂಲಕ ಮೀನುಗಾರಿಕೆಗೆ ತೆರಳಿದ ವ್ಯಕ್ತಿ ಸಮುದ್ರ ಪಾಲು
ಟ್ಯೂಬ್ ಮೂಲಕ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಮುದ್ರದ ತೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಉಳಿಯಾರಗೋಳಿ ಕಡಲ ಕಿನಾರೆಯಲ್ಲಿ ನಡೆದಿದೆ. ಉಳಿಯಾರಗೋಳಿ ಯಾರ್ಡ್ ಬಳಿಯ ನಿವಾಸಿ ಸಂತೋಷ್ (48) ಮೀನುಗಾರಿಕೆಗೆ ತೆರಳಿ ನಾಪತ್ತೆ ಯಾಗಿರುವ ವ್ಯಕ್ತಿ.
ಸಾಂಪ್ರದಾಯಿಕ ರೀತಿಯಲ್ಲಿ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದ ಸಂತೋಷ್ ಬುಧವಾರ ಸಂಜೆ 5 ಗಂಟೆಯ ವೇಳೆಗೆ ಟ್ಯೂಬ್ ಧರಿಸಿಕೊಂಡು ಮೀನುಗಾರಿಕೆಗೆ ತೆರಳಿದ್ದು, ಬಲೆ ಬೀಸಿ ವಾಪಸ್ಸಾಗುತ್ತಿರುವಾಗ ಈ ಘಟನೆ ಸಂಭವಿಸಿದೆ. ಮಲ್ಪೆಯ ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಸಂಗಡಿಗರು ಸಮುದ್ರದಲ್ಲಿ ಮುಳುಗಿರುವ ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸಿದ್ದು ರಾತ್ರಿಯವರೆಗೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.