ಸಮುದ್ರಕ್ಕೆ ಬಿದ್ದ ವ್ಯಕ್ತಿ : ರಕ್ಷಿಸಿದ ಸ್ವೀಡನ್ ಪ್ರಜೆ
ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಿಂದ ಸಮುದ್ರಕ್ಕೆ ಬಿದ್ದ ವ್ಯಕ್ತಿಯನ್ನು ವಿದೇಶಿ ಪ್ರವಾಸಿಗ ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.
ಸೋಮೇಶ್ವರ ರೈಲ್ವೇ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಚೆಟ್ಟಿಯಾರ್(41) ರಕ್ಷಿಸಲ್ಪಟ್ಟ ವ್ಯಕ್ತಿ.ಸ್ವೀಡನ್ ದೇಶದ ಪ್ರವಾಸಿಗ ಆಡಮ್ ರಕ್ಷಿಸಿದವರು. ಇಂದು ಮಧ್ಯಾಹ್ನದ ವೇಳೆ ಪ್ರವೀಣ್ ಅವರು ಸೋಮೇಶ್ವರ ಕಡಲ ತೀರದ ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಆಯಯತಪ್ಪಿ ಸಮುದ್ರಕ್ಕೆ ಬಿದ್ದಿದ್ದರು. ಈ ವೇಳೆ ಅಲ್ಲೇ ಮೀನಿಗೆ ಗಾಳ ಹಾಕುತ್ತಿದ್ದ ಸ್ವೀಡನ್ ದೇಶದ ಪ್ರವಾಸಿಗ ಆಡಮ್ ತಕ್ಷಣ ಸಮುದ್ರಕ್ಕೆ ಧುಮುಕಿ ಪ್ರವೀಣ್ ಅವರನ್ನು ರಕ್ಷಿಸಿದ್ದಾರೆ. ಅಸ್ವಸ್ಥಗೊಂಡಿದ್ದ ಪ್ರವೀಣ್ ಅವರಿಗೆ ಆಡಂ ಪ್ರಾಥಮಿಕ ಚಿಕಿತ್ಸೆ ನೀಡಿ , ನಂತರ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರವೀಣ್ ಪ್ರಾಣ ರಕ್ಷಿಸಿದ ವಿದೇಶಿ ಪ್ರಜೆ ಆಡಂ ಅವರ ಕಾರ್ಯದ ಬಗ್ಗೆ ಸ್ಥಳೀಯರು ಮತ್ತು ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಂದೂವರೆ ತಿಂಗಳ ಭಾರತ ದೇಶದ ಪ್ರವಾಸದಲ್ಲಿರುವ ಆಡಂ ಅವರು ಮಂಗಳೂರು ಸೇರಿದಂತೆ ಚೆನ್ನೆöÊ ಇನ್ನಿತರ ಬೀಚ್ ಗಳಿಗೆ ಭೇಟಿ ನೀಡಿ ಸೋಮೇಶ್ವರ ಸಮುದ್ರ ತೀರಕ್ಕೆ ಆಗಮಿಸಿದ್ದರು.