ಉಳ್ಳಾಲ ನಗರಸಭೆ ಭ್ರಷ್ಟಾಚಾರ ಲೋಕಾಯುಕ್ತ ತನಿಖೆಗೆ ಎಸ್‍ಡಿಪಿಐ ಆಗ್ರಹ
ಉಳ್ಳಾಲ: ಉಳ್ಳಾಲ ನಗರಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಕುಂಠಿತಗೊಂಡಿದ್ದು, ಉಳ್ಳಾಲ ನಗರಸಭೆಯ ಪೌರಾಯುಕ್ತೆ ತಕ್ಷಣ ಉಳ್ಳಾಲದ ಮೂಲಭೂತ ಸೌಕರ್ಯದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಮತ್ತು ಕಳೆದ ಎರಡು ವರ್ಷದ ಅವಧಿಯಲ್ಲಿ ನಡೆದ ಭೃಷ್ಟಾಚಾರದ ವಿಚಾರದಲ್ಲಿ ಕೂಲಂಕುಷ ಪರಿಶೀಲನೆ ನಡೆಸಿ ಲೋಕಾಯುಕ್ತ ತನಿಖೆಗೆ ವಹಿಸಿಕೊಡಬೇಕು ಎಂದು ನಗರಸಭೆಯ ಎಸ್‍ಡಿಪಿಐ ಸದಸ್ಯ ರಮೀಝ್ ನಗರಸಭಾ ಪೌರಾಯುಕ್ತೆಯನ್ನು ಆಗ್ರಹಿಸಿದ್ದು, ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದೆ ಇದ್ದಲ್ಲಿ ನಗರಸಭೆಯ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಉಳ್ಳಾಲ ನಗರ ಎಸ್‍ಡಿಪಿಐ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆವರು ಕಳೆದ ಎರಡು ವರ್ಷದ ಕಾಂಗ್ರೆಸ್ ಅಧಿಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ನಗರಸಭೆಯ ವ್ಯಾಪ್ತಿಯಲ್ಲಿ ?ತ ಈ ಹಿಂದೆ ನಡೆದ ಕಾಮಗಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಕೋಟ್ಯಾಂತರ ರೂ ಬಿಲ್ಲ್ ಬಾಕಿಯಿದ್ದು, ಹುತ್ತಿಗೆದಾರರಿಗೆ ಬಿಲ್ಲ್ ಪಾವತಿಸಬೇಕು ಮತ್ತು ನಕಲಿ ಬಿಲ್ಲ್‍ಗಳಿದ್ದರೆ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಕೆಲವೊಂದು ವಾರ್ಡ್‍ಗಳಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸದೆ ತಾರತಮ್ಯ ಮಾಡಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆಯಿದ್ದು, ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಟಿಯಲ್ಲಿ ಎಸ್‍ಡಿಪಿಐಉಳ್ಳಾಲ ನಗರಸಭೆ ಅಧ್ಯಕ್ಷ ಅಬ್ಬಾಸ್ ಎ.ಆರ್., ಉಪಾಧ್ಯಕ್ಷ ಇಮ್ತಿಯಾಝ್ ಕೋಟೆಪುರ, ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಸುಹೈಲ್ ಉಳ್ಳಾಲ್. ಮಾಧ್ಯಮ ರಿಝ್ವಾನ್ ಸಜಿಪ, ನಗರಸಮಿತಿ ಸದಸ್ಯರುಗಳಾದ ಸಮೀರ್ ರೆಹಮತುಲ್ಲಾ ಎ.ಎಂ. ಉಪಸ್ಥಿತರಿದ್ದರು.