ಉಳ್ಳಾಲ: ಪೋಕ್ಸೊ ಕಾಯಿದೆಯಡಿ ದಾಖಲಾದ ಪ್ರಕರಣದ ಆರೋಪಿ ಪರಾರಿ
ಉಳ್ಳಾಲ: ಅಪ್ರಾಪ್ತ ವಿದ್ಯಾರ್ಥಿನಿ ವಿರುದ್ಧ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.ಅಂಬ್ಲಮೊಗರು ನಿವಾಸಿ ಇಕ್ಬಾಲ್ ಎಂಬಾತ ನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಸ್ಸಿಗಾಗಿ ಕಾಯುವ ಸಂದರ್ಭ ಮಾತನಾಡಿಸಲು ಯತ್ನಿಸಿದ್ದ ರಿಕ್ಷಾ ಚಾಲಕ ವಿದ್ಯಾರ್ಥಿನಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನು. ಜೂನ್ ತಿಂಗಳಲ್ಲಿ ನಡೆದ ಘಟನೆ ಕುರಿತು ಅಪ್ರಾಪ್ತೆ ಹೆತ್ತವರಲ್ಲಿ ಇತ್ತೀಚೆಗೆ ತಿಳಿಸಿದ್ದಳು. ಕೂಡಲೇ ಹೆತ್ತವರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ವಿವಾಹಿತನಾಗಿದ್ದಾನೆ. ಕೊಣಾಜೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.