ಉಳ್ಳಾಲ : ಹಿಟ್ ಆಂಡ್ ರನ್ ಪ್ರಕರಣ ಓರ್ವ ,ಮೃತ್ಯು, ಇನ್ನೋರ್ವನಿಗೆ ಗಾಯ

ಉಳ್ಳಾಲ: ಅಪರಿಚಿತ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನಮೊಗರು ಬಳಿ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊರಜಿಲ್ಲೆಯ ಕಾರ್ಮಿಕರಾಗಿದ್ದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೆದ್ದಾರಿ ಬಳಿಯ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ವಾಹನದ ಮೇಲೆ ಸಂಶಯ ವ್ಯಕ್ತಪಡಿಸಿರುವ ಪೆÇಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
