ಉಳ್ಳಾಲ: ಬಟ್ಟಂಪಾಡಿ ಕಡಲ್ಕೊರೆತ ಸ್ಥಳ ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ
ಉಳ್ಳಾಲ ತಾಲೂಕಿನ ಬಟ್ಟಂಪಾಡಿಯ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಭೇಟಿ ನೀಡಿ ಕಡಲ್ಕೊರೆತದ ಹಾನಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು