HomeFresh Newsಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ, ಇಬ್ಬರ ಬಂಧನ

ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ, ಇಬ್ಬರ ಬಂಧನ

ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸ್ ತಂಡ ಉಳ್ಳಾಲದ ಸೀಗ್ರೌಂಡ್ ನಲ್ಲಿ ನಡೆದಿದೆ. ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಬಂಧಿತರು. ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಬಂಧಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments