HomeFresh Newsಉಳ್ಳಾಲ. ಕಾರು ಮತ್ತು ಬೈಕ್ ನಡುವೆ ಅಪಘಾತ - ಸವಾರರಿಬ್ಬರಿಗೆ ಗಾಯ

ಉಳ್ಳಾಲ. ಕಾರು ಮತ್ತು ಬೈಕ್ ನಡುವೆ ಅಪಘಾತ – ಸವಾರರಿಬ್ಬರಿಗೆ ಗಾಯ

ಉಳ್ಳಾಲ : ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಂದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ.

ಪರಿಣಾಮ ಬೈಕ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಾಯಾಳುಗಳಿಬ್ಬರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತ ಸಿಸಿಟಿವಿ ದೃಶ್ಯ ಸೆರೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments