ಉಳ್ಳಾಲದಲ್ಲಿ ಸರಣಿ ಅಪಘಾತ


ಉಳ್ಳಾಲ : ಐದು ವಾಹನಗಳ ನಡುವೆ ಸರಣಿ ಅಪಘಾತ ನಡೆದು ಹಲವರು ಗಾಯಗೊಂಡ ಘಟನೆ ರಾ.ಹೆ 66 ರ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಭಾನುವಾರ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಇನೋವಾ ಕಾರು ಎದುರುಗಡೆಯಿದ್ದ ವಾಹನವೊಂದನ್ನು ಓವರ್ ಟೇಕ್ ನಡೆಸಲು ಏಕಾಏಕಿ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂಬದಿಯಲ್ಲಿದ್ದ ಐ20 ಕಾರು ಇನೋವಾ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ಒಂದು ಸುತ್ತು ತಿರುಗಿದ ಪರಿಣಾಮ, ಮತ್ತದೇ ರಸ್ತೆಯಲ್ಲಿ ಹಿಂಬದಿಯಿಂದ ಬರುತ್ತಿದ್ದ ಮಹಿಳೆಯರು, ಮಕ್ಕಳು ಸಹಿತ ಕುಟುಂಬವಿದ್ದ ಐ10 ಕಾರಿಗೆ ಢಿಕ್ಕಿ ಹೊಡೆದಿದೆ. ಅಲ್ಲಿಗೇ ನಿಲ್ಲದ ಕಾರು ಸ್ವಿಫ್ಟ್ ಕಾರು ಮತ್ತು ಸ್ಕೂಟರಿಗೂ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐ 20 ಕಾರಿನಲ್ಲಿದ್ದ ಅಲೋಷಿಯಸ್ ಕಾಲೇಜು ವಿದ್ಯಾರ್ಥಿ ಅಮೃತ್ ಎಂಬವರು, ಸ್ಕೂಟರ್ ಸವಾರ , ಸಹಿತ ಇತರೆ ಕಾರಿನಲ್ಲಿದ್ದವರೂ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಗಾಯಾಳುಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸರಣಿ ಅಪಘಾತಕ್ಕೆ ಕಾರಣವಾದ ಇನೋವಾ ಕಾರು ಪರಾರಿಯಾಗಿದೆ.

Related Posts

Leave a Reply

Your email address will not be published.