ಉಳ್ಳಾಲ: ಇಬ್ಬರು ಸಮುದ್ರಪಾಲು, ಓರ್ವನ ಶವ ಪತ್ತೆ, ಇನ್ನೋರ್ವ ನಾಪತ್ತೆ

ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ.

ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ ತೀರಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರದ ನೀರಲ್ಲಿ ಆಟವಾಡುತ್ತಿದ್ದ ಸಂದರ್ಭ ಮೂವರು ಅಲೆಗಳ ನಡುವೆ ಸಿಲುಕಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಮೊಗವೀರ ಜೀವರಕ್ಷಕ ಸದಸ್ಯರು ಸಮುದ್ರಕ್ಕೆ ಧುಮುಕಿ ಸೈಫ್ ಆಲಿ ಮತ್ತು ಸಲ್ಮಾನ್ ಇಬ್ಬರನ್ನು ಮೇಲಕ್ಕೆತ್ತಿದ್ದಾರೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಗಿದ್ದು, ಅಲ್ಲಿ ಸಲ್ಮಾನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಬಶೀರ್ ಅವರು ಇನ್ನೂ ಸಮುದ್ರದಲ್ಲಿ ಪತ್ತೆಯಾಗಿಲ್ಲ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
