ಉಳ್ಳಾಲ ; ಅಕ್ರಮ ಎಂಡಿಎಂಎ ಮಾರಾಟ: ಇಬ್ಬರು ಸಿಸಿಬಿ ವಶಕ್ಕೆ

ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಉಳ್ಳಾಲ ತಾಲೂಕಿನ ಮುಡಿಪು ಮೂಳೂರು ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕೊಲ್ನಾಡು ನಿವಾಸಿಯಾಗಿರುವ ಅಬ್ದುಲ್ ರಹಿಮಾನ್(42) ಮತ್ತು ಬೆಳ್ತಂಗಡಿ ತಾಲೂಕಿನ ಇಳಂತಿಲಾ ಗ್ರಾಮದ ಮೊಹಮ್ಮದ್ ಜಿಯಾದ್ (22) ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 1 ಲಕ್ಷ 75 ಸಾವಿರ ರೂ ಮೌಲ್ಯದ 35 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಆಲ್ಟೋ ಕಾರು ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
